ಮಂಗಳೂರು ಶ್ರೀ ವೆಂಕಟ್ರಮಣ ದೇವಸ್ಥಾನ: ‘ಚಂದ್ರ ಮಂಡಲ’ ಆಕರ್ಷಣೆ

ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಗಮನಸೆಳೆಯಿತು. ಭಾನುವಾರ ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ವಿಶೇಷ ಕೈಂಕರ್ಯ ನೆರವೇರಿತು. ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತಿಯಲ್ಲಿ ಈ ಸೇವೆ ನೆರವೇರಿತು. 20.01.2025 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ. ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ…

ಮಂಗಳೂರು ಶಾರದೋತ್ಸವ ಶತಮಾನೋತ್ಸವ.. ಕಣ್ಮನ ಸೆಳೆದ ವಿಗ್ರಹ

ಮಂಗಳೂರು : ಬಂದರು ನಗರಿಯಲ್ಲಿ ನವರಾತ್ರಿ ಉತ್ಸವದ ರಂಗು ಆವರಿಸಿದೆ. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ, ಆಚಾರ್ಯ ಮಠ ವಠಾರದಲ್ಲಿ ಪೂಜಿಸಲ್ಪಡುವ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ 101ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ಗಮನಸೆಳೆದಿದೆ. ಶ್ರೀ ಗೋಕರ್ಣ ಪರ್ತಗಾಳಿ ಮಠದ ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಭೇಟಿನೀಡಿದ್ದು ಶಾರದಾ ಮಾತೆಗೆ ಪೂಜೆ ಸಲ್ಲಿಸಿ ನೆರೆದ ಭಜಕರಿಗೆ ಆಶೀರ್ವದಿಸಿದರು. ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಬಳಿಕ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಗೊಂಡ ಸ್ಥಳಕ್ಕೆ ಶ್ರೀಗಳವರು ಆಗಮಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ, ದೇವಳದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು.