ಕೋವಿಡ್‌ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್‌ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಹಿಂದಿನ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆಗಿನ ಆರೋಗ್ಯ ಸಚಿವರನ್ನು ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ. ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ…

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್…

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ…

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು…

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ; ಸಿದ್ದರಾಮಯ್ಯ ಸರ್ಕಾರಕ್ಕೆ ಕೆಪಿಸಿಸಿ ಸಲಹೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಚಾಣಾಕ್ಷರು ವಿರೋಧ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದಾರೆ. ಸಿಎಂ ಅವರುವೀ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕರೇ ಸಲಹೆ ಮುಂದಿಟ್ಟಿದ್ದಾರೆ. ಅದರಲ್ಲೂ ಮಾಜಿ ಶಾಸಕರೂ ಆದ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ ಎಂದು ರಾಜಕೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ರಮೇಶ್ ಬಾಬು ಅವರ ಪತ್ರದಲ್ಲೇನಿದೆ..? ಕರ್ನಾಟಕ ರಾಜ್ಯ…