ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಹಾಗೂ ಹಿಂದಿನ ಬಿಜೆಪಿ ಸರ್ಕಾರದದಲ್ಲಿ ಸಚಿವರಾದ ಅಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವ ಪೊಲೀಸ್ ಆಫೀಸರ್ ಕೂಡ ಅನುಮತಿ ಕೇಳದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮದ ಹಿಂದಿನ ಅಜೆಂಡಾ ಏನು ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ. ಮುಡಾ ನಿವೇಶನ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ವಿರುದ್ದದ ಪ್ರಕರಣಗಳು ಮುನ್ನಲೆಗೆ ಬಂದಿವೆ. ಈ ನಾಯಕರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ ಹಾಗೂ ಕಂದಾಯ ಮಂತ್ರಿ ಕೃಷ್ಣಬೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ…
Tag: ಮುರುಗೇಶ್ ನಿರಾಣಿ
ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಅರ್ಜಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ನಡುವೆ ರಾಜ್ಯಪಾಲರು ಶೋಕಾಸ್ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು. ತಪ್ಪು ಮಾಡಿದ್ದರೆ ತಾನೇ ಹೆದರುವುದು ಎಂದರು. ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ರಾಜಭವನ ಹಾಗೂ…