‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-2024 ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಯಕ್ಷಗಾನದಲ್ಲಿ ಮಹಿಳೆಯರ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕಿದೆ ಎಂದು ಪ್ರತಿಪಾದಿಸಿದರು. ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ…