ಸೆಪ್ಟೆಂಬರ್ 14-16: ಪುಣೆಯಲ್ಲಿ RSS ಅಖಿಲ ಭಾರತೀಯ ಸಮನ್ವಯ ಬೈಠಕ್

ಪುಣೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಮನ್ವಯ ಬೈಠಕ್ ಸೆಪ್ಟೆಂಬರ್ 14ರಿಂದ 16ರವರೆಗೆ ಪುಣೆಯಲ್ಲಿ ನಡೆಯಲಿದೆ. ವಿವಿಧ ಕ್ಷೇತ್ರಗಳ 36 ಸಂಘ ಸಂಸ್ಥೆಗಳ 266 ಪ್ರಮುಖರು ಬೈಠಕ್ ನಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಈ ಬೈಠಕ್ ನಲ್ಲಿ ಪರಿಸರ ಸ್ನೇಹಿ ಜೀವನಶೈಲಿ, ಜೀವನಮೌಲ್ಯಾಧಾರಿತ ಕುಟುಂಬ ವ್ಯವಸ್ಥೆ, ಸಾಮರಸ್ಯಕ್ಕಾಗಿ ಪ್ರಾಧಾನ್ಯತೆ, ಸ್ವದೇಶಿ ನಡವಳಿಕೆ ಮತ್ತು ನಾಗರಿಕ ಕರ್ತವ್ಯಗಳ ಪಾಲನೆ ಕುರಿತಾಗಿ ಬೈಠಕ್ ನಲ್ಲಿ ಚರ್ಚಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆರ್‌ಎಸ್‌ಎಸ್ ಸ್ವಯಂಸೇವಕರು ರಾಷ್ಟ್ರಾದ್ಯಂತ ಶಾಖೆಗಳ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಶಾಖೆ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಜೀವನದ ವಿವಿಧ ರಂಗಗಳ ಹಲವು ಚಟುವಟಿಕೆಗಳಲ್ಲಿ ಸ್ವಯಂಸೇವಕರು ನಿರತರಾಗಿದ್ದಾರೆ. ಈ ಎಲ್ಲಾ ಕಾರ್ಯಗಳು ಸೇವೆ ಮತ್ತು ರಾಷ್ಟ್ರ ನಿರ್ಮಾಣದ ಕೆಲಸ. ಸಮನ್ವಯ ಬೈಠಕ್ ನಲ್ಲಿ ಭಾಗವಹಿಸುವ…