ಬೆಂಗಳೂರು: ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು (ಆರ್ಎಎಸ್) ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಎಂಬೆಸ್ಸಿ ಗಾಲ್ಫ್ ಲಿಂಕ್ಸ್‌ನಲ್ಲಿ ಇಂಟ್ಯೂಟಿವ್ಸ್ ಗ್ಲೋಬಲ್ ಕೆಪಾಬಿಲಿಟಿ ಸೆಂಟರ್ (ಜಾಗತಿಕ ಸಾಮರ್ಥ್ಯ ಕೇಂದ್ರ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಜಾಗತಿಕ ಮಟ್ಟದಲ್ಲಿ ಈಗ ವೈದ್ಯಕೀಯ ಕೇಂದ್ರಗಳಲ್ಲಿ ಸೂಕ್ತ ಆರೈಕೆ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇಂಟ್ಯೂಟಿವ್, ಈ ಕ್ಷೇತ್ರದಲ್ಲಿ ಜಾಗತಿಕ ತಂತ್ರಜ್ಞಾನ ಹೊಂದಿದ್ದು ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿದೆ. ಆರೋಗ್ಯ ಆವಿಷ್ಕಾರದ ಪ್ರಗತಿಗೆ ಇನ್ನಷ್ಟು ಉತ್ತೇಜನ ನೀಡಲು ಈ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಇದರಿಂದ ಸಾಕಷ್ಟು ಪ್ರಯೋಜನಗಳಾಗಲಿವೆ ಎಂದರು. “ನಾವು ಇಂಟ್ಯೂಟಿವ್‌ನ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಉದ್ಘಾಟಿಸುತ್ತಿರುವುದು ಮಹತ್ವದ ಮೈಲಿಗಲ್ಲಾಗಿದೆ. ರೊಬೊಟಿಕ್ಸ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳು…