📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್ ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು, ಇದೀಗ ಕನ್ನಡ ರಾಜ್ಯೋತ್ಸವವನ್ನೂ ನಾಡಭಕ್ತಿಯ ವೈಭವದೊಂದಿಗೆ ಆಚರಿಸಿದ್ದಾರೆ. ಕನ್ನಡ ರಾಜೋತ್ಸವದ ಮುನ್ನಾದಿನದಂದು, ಲಂಡನ್‌ನಲ್ಲಿರುವ ಕನ್ನಡಿಗರು ಕರುನಾಡಿನ ಶ್ರೀಮಂತ ಪರಂಪರೆ, ಭಾಷೆ ಮತ್ತು ಸಂಸ್ಕೃತಿ ವೈಭವದ ಪ್ರತೀಕವಾಗಿ ಆಚರಿಸಿದರು. ಪ್ರತೀ ವರ್ಷ ನವೆಂಬರ್ 1 ರಂದು ಲಂಡನ್‌ನಲ್ಲೂ ಅನಿವಾಸಿ ಕನ್ನಡಿಗರು ಕನ್ನಡ ರಾಜೋತ್ಸವ ಆಚರಿಸಿ ಕರ್ನಾಟಕ ರಚನೆಯನ್ನು ಸ್ಮರಿಸುತ್ತಾರೆ. ಇದು ವಿಶ್ವಾದ್ಯಂತ ಕನ್ನಡಿಗರಿಗೆ ಹೆಮ್ಮೆ ಮತ್ತು ಏಕತೆಯ ದಿನವಾಗಿದೆ. ಈ ಸಂದರ್ಭವು ಕರ್ನಾಟಕ ಮತ್ತು ಭಾರತವನ್ನು ತಮ್ಮ ಮನೆ ಎಂದು ಕರೆಯುವ ಪ್ರತಿಯೊಬ್ಬರ ಏಕತೆ, ಹೆಮ್ಮೆ ಮತ್ತು ಹಂಚಿಕೆಯ ಹೆಗ್ಗುರುತನ್ನು ಪ್ರತಿನಿಧಿಸುತ್ತದೆ. ಕರ್ನಾಟಕದ ವೈವಿಧ್ಯಮಯ ಸಂಪ್ರದಾಯಗಳು, ಕಲಾ ಪ್ರಕಾರಗಳು ಮತ್ತು ಭಾಷಾ ಪರಂಪರೆಗೆ ಗೌರವವಾಗಿ, ನಾವು ಕನ್ನಡ ಭಾಷೆ ಮತ್ತು…
Tag: ಲಂಡನ್ ಮಾಜಿ ಮೇಯರ್ ಡಾ.ನೀರಜ್ ಪಾಟೀಕ್
ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ
📝 ಜಯ ಪ್ರಕಾಶ್ ಲಂಡನ್: ಭೀಕರ ಹಿಂಸಾಚಾರದಿಂದ ಬಾಂಗ್ಲಾದೇಶ ತ್ತರಿಸಿದೆ. ಉದ್ಯೋಗ ನೀತಿ ವಿರುದ್ದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳು ದಂಗೆ ಎದ್ದಿದ್ದು ನಿರಂತರ ಹಿಂಸಾಚಾರದಿಂದಾಗಿ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಹಿಂಸಾಚರದಿಂದ ಬೆಚ್ಚಿದ ಶೇಖ್ ಹಸೀನಾ ಅವರು ಪ್ತಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದಾರೆ. ಬಾಂಗ್ಲಾದೇಶದ ಈ ಪರಿಸ್ಥಿತಿ ಬಗ್ಗೆ ಲಂಡನ್‌ನಲ್ಲಿರುವ ಬ್ರಿಟಿಷ್ ಲೇಬರ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಟಿಷ್ ಲೇಬರ್ ಪಾರ್ಟಿ ನಾಯಕರೂ ಆದ, ಭಾರತ ಮೂಲದ ಮಾಜಿ ಲಂಡನ್ ಮೇಯರ್ ಡಾ.ನೀರಜ್ ಪಾಟೀಲ್, ಬಾಂಗ್ಲಾದೇಶದಲ್ಲಿ ಶೀಘ್ರ ಶಾಂತಿ ಮರುಸ್ಥಾಪಿಸಲು ವಿಶ್ವ ಸಮುದಾಯ ಸಹಕಾರ ನೀಡಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ಬಾಂಗ್ಲಾದೇಶ ಸಂಸತ್ತು ವಿಸರ್ಜನೆಯಾಗಿದೆ, ಅದರ ಪ್ರಧಾನಿ ಈಗ ದೆಹಲಿಯಲ್ಲಿದ್ದಾರೆ. ಮುಂದಿನ ಮೂರು ತಿಂಗಳೊಳಗೆ ಚುನಾಯಿತ ಸರ್ಕಾರವನ್ನು ಮರುಸ್ಥಾಪಿಸುವ ಭರವಸೆಯೊಂದಿಗೆ ಮಿಲಿಟರಿ ಸ್ವಾಧೀನವಿದೆ. ಇದು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯಾಗಿದೆ ಮತ್ತು…