ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಗಮನಸೆಳೆಯಿತು. ಭಾನುವಾರ ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ವಿಶೇಷ ಕೈಂಕರ್ಯ ನೆರವೇರಿತು. ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತಿಯಲ್ಲಿ ಈ ಸೇವೆ ನೆರವೇರಿತು. 20.01.2025 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ. ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ…