ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ. ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. “ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿಶೀಲಿಸಲು…