‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಮಲಿಂಗ ರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.‌ ‘ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ…

‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

ಬೆಂಗಳೂರು: ‘KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ ‘ಶಕ್ತಿ’ ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಡಿಕೆಶಿ, ‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನೂ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು ತಮ್ಮ ಹೇಳಿಕೆ ಬಗ್ಗೆ ವ್ಯಾಪಕ ಚರ್ಚೆ, ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರಿಗೆ ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು. ಆರ್ಥಿಕವಾಗಿ ಸದೃಢವಾಗಿರುವವರನ್ನು ಉಲ್ಲೇಖಿಸಿದ್ದೆ. ಐಟಿಬಿಟಿ ಸಂಸ್ಥೆಯವರು, ಎಂಎನ್‌ಸಿ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು…