ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ರಾಯಚೂರು: ಸಚಿವ ಸಂಪುಟದ ನಿರ್ಣಯದ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯುಷನ್‌)ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ತಕ್ಷಣವೇ ಕೇಂದ್ರ ಸರ್ಕಾರ ವಾಪಸ್‌‍ ಕರೆಸಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ, ಕೌಶಲ್ಯಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ಒತ್ತಾಯಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಸಚಿವ ಸಂಪುಟದ ತೀರ್ಮಾನವನ್ನು ರಾಜ್ಯಪಾಲರು ಒಪ್ಪಿಕೊಳ್ಳಬೇಕು. ಆದರೆ ಸಂಪುಟದ ತೀರ್ಮಾನವನ್ನು ತಿರಸ್ಕರಿಸಿ ಅನುಮತಿ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು. ರಾಜ್ಯಪಾಲರು ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ಸರ್ಕಾರ 60 ಪುಟಗಳ ಸಮರ್ಪಕ ಉತ್ತರ ನೀಡಿದೆ. ಇದನ್ನು ಪರಿಶೀಲಿಸದೆ ಕೇವಲ ದೂರದಾರರ ಮನವಿಯನ್ನು…

ಅಂದು ಈಶ್ವರಪ್ಪ ತಲೆದಂಡಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ! ಈಗ ಶರಣ ಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯುತ್ತಾರ?

ಬೆಂಗಳೂರು: ಕಲಬುರಗಿ ಜಿಲ್ಲೆ ಶಿರೋಳ್ಳಿ ಗ್ರಾಮದಲ್ಲಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿವ ಶರಣ್ ಪ್ರಕಾಶ್ ಪಾಟೀಲ್ ಮೇಲಿನ ಆರೋಪವು ಸಿಎಂ ಸಿದ್ದರಾಮಯ್ಯ ಅವರಿಗೂ ಸವಾಲೆಂಬಂತಾಗಿದೆ. ತನ್ನ ಸಾವಿಗೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಕಾರಣ ಎಂಬ ಶಿವಕುಮಾರ್ ಆಡಿಯೋ ವೈರಲ್ ಆಗಿದ್ದು, ತಮ್ಮ ಪಕ್ಷದ ಕಾರ್ಯಕರ್ತನ ಸಾವಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರೂ ರೊಚ್ಚಿಗೆದ್ದಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರನೊಬ್ಬ ಡೆತ್ ನೋಟ್‌ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖಿಸಿದ ಸಂದರ್ಭದಲ್ಲಿ ರೊಚ್ಚಿಗೆದ್ದಿದ್ದ ಕಾಂಗ್ರೆಸ್ ನಾಯಕರು ಈಶ್ವರಪ್ಪ ರಾಜೀನಾಮೆಗೆ ಪಟ್ಟುಹಿಡಿದಿದ್ದರು. ಒತ್ತಡಕ್ಕೆ ಮಣಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಈಶ್ವರಪ್ಪರ ರಾಜೀನಾಮೆ ಪಡೆದಿದ್ದರು. ಇದೀಗ ಅದೇ ಮಾದರಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ದವೂ ಆರೋಪ ಕೇಳಿಬಂದಿದೆ. ಅದರಲ್ಲೂ ಸಾವಿಗೆ ಶರಣಾಗುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನದೇ ಧ್ವನಿಯಲ್ಲಿ ಸಚಿವರ ವಿರುದ್ದ…