ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಹಿಂದಿನ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆಗಿನ ಆರೋಗ್ಯ ಸಚಿವರನ್ನು ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ. ಏಪ್ರಿಲ್ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಪಿಪಿಇ ಕಿಟ್ ಖರೀದಿ ಪ್ರಕ್ರಿಯೆ ಸಂದರ್ಭ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ…
Tag: ಶ್ರೀರಾಮುಲು
ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!
ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ. ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ…