“RGUHS ವಿಸಿ ಪೋಸ್ಟ್ ಬಿಕರಿಯಾಗದಿರಲಿ”, ರಾಜ್ಯ ಸರ್ಕಾರಕ್ಕೆ CRF ಹೀಗೊಂದು ಸಲಹೆ

ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ…