‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಬೆಂಗಳೂರು: ‘ಶಕ್ತಿ’ ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ ‘X’ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಶಕ್ತಿ’ ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು…

‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಮಲಿಂಗ ರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.‌ ‘ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ…

ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದು (28.08.2024) ಸಾರಿಗೆ ಆಯುಕ್ತರ ಕಛೇರಿಯಲ್ಲಿ, ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ಕುರಿತಂತೆ ಮಾಹಿತಿ ಪಡೆದ ಸಚಿವರು ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪ್ರವರ್ತನ ಚಟುವಟಿಕೆಗಳೂ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಂಡು ಕಾರ್ಯನಿರ್ವಹಿಸಲು ಸೂಚಿಸಿದರು. 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ವಿವರ: ವಾರ್ಷಿಕ ರಾಜಸ್ವ ಗುರಿ- ರೂ.13000‌ಕೋಟಿಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ. ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534…