“RGUHS ವಿಸಿ ಪೋಸ್ಟ್ ಬಿಕರಿಯಾಗದಿರಲಿ”, ರಾಜ್ಯ ಸರ್ಕಾರಕ್ಕೆ CRF ಹೀಗೊಂದು ಸಲಹೆ

ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ…

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು. ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಅರ್ಜಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ನಡುವೆ ರಾಜ್ಯಪಾಲರು ಶೋಕಾಸ್ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ ಎಂದು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು. ತಪ್ಪು ಮಾಡಿದ್ದರೆ ತಾನೇ ಹೆದರುವುದು ಎಂದರು. ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ರಾಜಭವನ ಹಾಗೂ…

ನಾಡಧ್ವಜಕ್ಕೆ ಸಿಗದ ಅನುಮತಿ; ಮೋದಿ ಸರ್ಕಾರದ ವಿರುದ್ದ ಸಿಎಂ ಕೆಂಡ; ನೆಟ್ಟಿಗರಿಂದ ಸಿಎಂಗೆ ತರಾಟೆ

ಬೆಂಗಳೂರು: ನಾಡ ಧ್ವಜಕ್ಕೆ ಅನುಮತಿ ನೀಡದೆ ಕೇಂದ್ರದ ಮೋದಿ ಸರ್ಕಾರ ಆರೂವರೆ ಕೋಟಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಈ ಹಿಂದೆ 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಈ ಕೆಲಸವನ್ನು ಮಾಡಿಲ್ಲವೇಕೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಏನಿದು ಬೆಳವಣಿಗೆ? ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಕನ್ನಡಕ್ಕೊಂದು ನಾಡಗೀತೆಯಂತೆ ನಾಡಧ್ವಜ ಇರಬೇಕೆಂಬುದು ಆರೂವರೆ ಕೋಟಿ ಕನ್ನಡಿಗರ ಒಕ್ಕೊರಲ ಒತ್ತಾಯ. ಕನ್ನಡಿಗರ ಎದೆಯ ದನಿಗೆ ಓಗೊಟ್ಟು ನಾಡದ್ವಜವೊಂದನ್ನು ವಿನ್ಯಾಸಗೊಳಿಸಿ, ಮನ್ನಣೆಗಾಗಿ ಐದು ವರ್ಷಗಳ ಹಿಂದೆಯೇ ನಾವು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದೆವು. ಆದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅನ್ಯಾಯ ಎಸಗಿದೆ’ ಎಂದು ಸಿಎಂ ದೂರಿದ್ದಾರೆ. ‘ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.…

ಪಕ್ಷಾಂತರ ಪರ್ವ: ಕಾಂಗ್ರೆಸ್ ಗರಡಿಯತ್ತ ಕಮಲ ನಾಯಕರ ಪರೇಡ್..

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಇರುವಂತೆಯೇ ರಾಜಕೀಯ ವಲಯದಲ್ಲಿ ವಿದ್ಯಮಾನಗಳು ಗರಿಗೆದರಿವೆ. ಇದೇ ವೇಳೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ NDA ಜೊತೆ ಗುರುತಿಸಿಕೊಂಡ ಜೆಡಿಎಸ್ ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಮೈತ್ರಿ ಘೋಷಿಸಿದೆ. ಈ ಮೈತ್ರಿ ಬೆಳವಣಿಗೆ ಬಗ್ಗೆ ಬಿಜೆಪಿಯ ಹಲವು ಮುಖಂಡರು ಅಸಮಾಧಾನಗೊಂಡಿದ್ದಾರೆ. ಈ ಬೆಳವಣಿಗೆಯ ನಡುವೆಯೇ ಬಿಜೆಪಿಯ ನಾಯಕರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಪಕ್ಷಾಂತರದ ಇಂಗಿತ ವ್ಯಕ್ತಪಡಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಕ್ಟೋಬರ್ 20ರಂದು ಕಾಂಗ್ರೆಸ್ ಸೇರುವ ತೀರ್ಮಾನ ಪ್ರಕಟಿಸಿರುವ ಬೆನ್ನಲೇ, ಮಾಜಿ ಶಾಸಕರಾದ ರಾಮಪ್ಪ ಲಮಾಣಿ ಹಾಗೂ ಎಂ.ಪಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸೇರುವ ಮೂಲಕ ರಾಜ್ಯ ರಾಕೀಯದ ಬೆಳವಣಿಗೆ ಬಗ್ಗೆ ಅನೇಕಾನೇಕ ಲೆಕ್ಕಾಚಾರಗಳಿಗೆ ನಾಂದಿಹಾಡಿದ್ದಾರೆ.ಬಿಜೆಪಿ ಮುಖಂಡರಾದ ಮಾಜಿ ಶಾಸಕ ರಾಮಪ್ಪ…