ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ. ಇದೇ ವೇಳೆ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸಹಿತ 15 ಶಾಸಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂದು ಸಿಟ್ಟು ಹೊರಹಾಕಿದ್ದು, ತಮ್ಮ ನಿಲುವನ್ನು ಮರು ಪರಿಶೀಲಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್, ಭೀಮರಾವ್ ಪಾಟಿಲ. ತಿಪ್ಪಣ್ಣಾ…
Tag: ಸಿದ್ದಾರಾಮಯ್ಯ
‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಈ ಪ್ರಾಸಿಕ್ಯೂಷನ್ ಅನಿಮತಿಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ. ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು…
ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ. ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ “ಜನಾಂದೋಲನ” ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ…
ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..! ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು…