ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಹಾಗೂ ಹಿಂದಿನ ಬಿಜೆಪಿ ಸರ್ಕಾರದದಲ್ಲಿ ಸಚಿವರಾದ ಅಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವ ಪೊಲೀಸ್ ಆಫೀಸರ್ ಕೂಡ ಅನುಮತಿ ಕೇಳದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮದ ಹಿಂದಿನ ಅಜೆಂಡಾ ಏನು ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ. ಮುಡಾ ನಿವೇಶನ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ವಿರುದ್ದದ ಪ್ರಕರಣಗಳು ಮುನ್ನಲೆಗೆ ಬಂದಿವೆ. ಈ ನಾಯಕರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ ಹಾಗೂ ಕಂದಾಯ ಮಂತ್ರಿ ಕೃಷ್ಣಬೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ…