ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿನ ಭ್ರಷ್ಟಾಚಾರ ಆರೋಪದಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ. ಸುಮಾರು 1,300 ಕೋಟಿ ರೂಪಾಯಿ ಹಗರಣ ಆರೋಪ ಸಂಬಂಧ ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಿಸೋಡಿಯಾ ಮತ್ತು ಜೈನ್ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದ್ದು, 2022 ರಲ್ಲಿ ದೆಹಲಿ ಸರ್ಕಾರದ ಜಾಗೃತ ನಿರ್ದೇಶನಾಲಯ, ಹಗರಣದ ತನಿಖೆಗೆ ಶಿಫಾರಸು ಮಾಡಿ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತ್ತು. ಇದೀಗ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲು…