ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್ 27) ರಾಮ್ ಚರಣ್ ಅವರ ಜನ್ಮದಿನದಂದು ಈ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಪೆಡ್ಡಿ’ ಎನ್ನುವ ಟೈಟಲ್ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಬುಚಿ ಬಾಬು ಸನಾ ನಿರ್ದೇಶಿಸಲಿದ್ದಾರೆ.