ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ ತರಬೇಕೆಂದು ವಕೀಲರ ಸಮೂಹ ಆಗ್ರಹಿಸಿದೆ. ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯ. ಈ ವಿಚಾರದಲ್ಲಿ ರಾಜ್ಯದ ನ್ಯಾಯಾಂಗ ಕ್ಷೇತ್ರದ ಪರಿಣಿತರು ಇಟ್ಟಿರುವ ಹೆಜ್ಜೆ ಗಮನಸೆಳೆದಿದೆ. ಈ ಸಂಬಂಧ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮನೋರಾಜ್ ರಾಜೀವ್ ನೇತೃತ್ವದಲ್ಲಿ ಮಂಗಳೂರಿನ ವಕೀಲರ ತಂಡವು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ನಾಯಕರಿಗೆ ಮನವಿ ಸಲ್ಲಿಸಿ, ಮಸಾಜ್ ಹಾಗೂ ಸ್ಪಾ…