ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್‌ಪಿಸಿ ಕಲಂ 321 ರಲ್ಲಿ…
Tag: Advocate Ramesh Babu
ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು. ಸಿಎಂ ಸಿದ್ದರಾಮಯ್ಯರ…
ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ…
‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ…
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆಂಬ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜಕೀಯ ವಿಶ್ಲೇಷಕರೂ, ಕಾನೂನು ತಜ್ಞರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು, ಪ್ರಾಸಿಕ್ಯೂಷನ್ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ‘ಹೈಕೋರ್ಟ್ ಹಿಂದೆ ನೀಡಿದ್ದ ಆದೇಶ’ವನ್ನು ಪರಿಗಣಿಸಿಲ್ಲ ಎಂಬ ಬಗ್ಗೆ ಬೊಟ್ಟುಮಾಡಿದ್ದಾರೆ. ಕೆಪಿಸಿಸಿ ಮಾಧ್ಯಮ-ಸಂವಹನ ವಿಭಾಗದ ಅಧ್ಯಕ್ಷರೂ ಆಗಿರುವ ರಮೇಶ್ ಬಾಬು, ರಾಜ್ಯಪಾಲರ ಆತುರದ ನಡೆಯು ರಾಜಕೀಯ ಪ್ರೇರಿತವಾಗಿದ್ದು, ಇದು ಅನಗತ್ಯ ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶ, ಸಲಹೆಗಳನ್ನು ರಾಜ್ಯಪಾಲರು ಗೌರವಿಸಿಲ್ಲ. ಇದು ಪಕ್ಷಪಾತೀಯ ನಡೆಯಾಗಿದ್ದು, ಇದರಿಂದ ಅನಗತ್ಯ ಕಾನೂನು ಸಂಘರ್ಷ…
ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ…
ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ
ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…
ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ; ಸಿದ್ದರಾಮಯ್ಯ ಸರ್ಕಾರಕ್ಕೆ ಕೆಪಿಸಿಸಿ ಸಲಹೆ
ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಚಾಣಾಕ್ಷರು ವಿರೋಧ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದಾರೆ. ಸಿಎಂ ಅವರುವೀ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕರೇ ಸಲಹೆ ಮುಂದಿಟ್ಟಿದ್ದಾರೆ. ಅದರಲ್ಲೂ ಮಾಜಿ ಶಾಸಕರೂ ಆದ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ ಎಂದು ರಾಜಕೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ರಮೇಶ್ ಬಾಬು ಅವರ ಪತ್ರದಲ್ಲೇನಿದೆ..? ಕರ್ನಾಟಕ ರಾಜ್ಯ…