ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಆಯುಕ್ತರಿಗೆ ಪತ್ರ ಬರೆ ಬೆಳವಣಿಗೆ ಗಮನಸೆಳೆದಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವ ಬಗ್ಗೆ ಭರವಸೆ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ರಾಜ್ಯವನ್ನು ‘ಸರ್ವ ಜನಾಂಗಗಳ ಶಾಂತಿಯ ತೋಟ’ವನ್ನಾಗಿ…