ನವದೆಹಲಿ: ಕೆಲವು ವರ್ಷಗಳ ಹಿಂದೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಪಹಾಸ್ಯ ಮಾಡಿದ್ದ ಪಾಕಿಸ್ತಾನಕ್ಕೆ ಈ ಬಾರಿ ಭಾರತೀಯ ಸೇನೆ ಭಯಾನಕ ಉತ್ತರ ನೀಡಿದೆ. ಅಂದು ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಈ ಬಾರಿ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆದಿರುವುದನ್ನು ಒಪ್ಪಿಕೊಂಡಿದೆ. ಪಾಕಿಸ್ತಾನಿ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಕೂಡ ತಮ್ಮ ದೇಶದ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದಾರೆ. “ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿ ದಾಳಿಯ ನಂತರ ಉಭಯ ದೇಶಗಳ ನಡುವಿನ ತೀವ್ರ ಉದ್ವಿಗ್ನತೆಯ ನಡುವೆ ಭಾರತವು ಕೋಟ್ಲಿ, ಬಹ್ವಲ್ಪುರ್ ಮತ್ತು ಮುಜಫರಾಬಾದ್ ಮೇಲೆ ಕ್ಷಿಪಣಿ ದಾಳಿ ನಡೆಸಿತು” ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ. ಇದೇ ವೇಳೆ, ಭಾರತ ಹೊಸ ಇತಿಹಾಸ ಬರೆದಿದೆ ಎಂದು ಪ್ರಧಾನಿಯವರ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ಮಿಲಿಟರಿ ವೀಡಿಯೋವೊಂದನ್ನು ಅವರು…