ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿರುವ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಾಸಭಾ ಮುಖ್ಯಸ್ಥರು, ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ಹೊರಹಾಕಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್, ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್, ವಿಪ್ರ ಮುಖಂಡರಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್ ಮೊದಲಾದವರು ಸುದ್ದಿಗೋಷ್ಠಿ ನಡೆಸಿದರು. ಎಸ್.ರಘುನಾಥ್ ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ. ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ…