ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿತ್ತು. ದೇವಾಲಯದ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ‘ಬಬಿಯಾ’ ಸಾವಿನ ನಂತರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಲ್ಲಿ ಬೇಸರ ಕಂಡುಬರುತ್ತಿತ್ತು. ಇದೀಗ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದೆ. ಈ ಹೊಸ ಮೊಸಳೆ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಸುಮಾರು ಒಂದು ವಾರದ ಹಿಂದೆ ದೇಗುಲಕ್ಕೆ ಭೇಟಿ ನೀಡಿದ್ದ ಭಕ್ತರೊಬ್ಬರು ಕಲ್ಯಾಣಿಯಲ್ಲಿ ‘ಮೊಸಳೆ ಕಂಡಂತೆ ಆಯಿತು’ ಎಂದು ಹೇಳಿಕೊಂಡಿದ್ದರು. ಆದರೆ ಯಾರೂ ಇದನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಮೊಸಳೆ ಇರುವುದನ್ನು ದೇಗುಲದ ಆಡಳಿತ ಮಂಡಳಿಯೇ ಖಚಿತಪಡಿಸಿದೆ. ದೇವರ ಪ್ರತಿಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ಈ ಕುರಿತು ಸಂತಸ ಹಂಚಿಕೊಂಡಿರುವ ಮಾಜಿ ಸಚಿವ ಸಿ.ಟಿ.ರವಿ, ‘ಸರೋವರ…