ಅಮರಾವತಿ: ಅರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರವು ಗ್ರಾಚ್ಯುಟಿ ಘೋಷಿಸಿದೆ. ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಗಳಿಗೆ ಹೆಚ್ಚಿಸಿರುವ ಸರ್ಕಾರ ಹಲವು ಸೌಲಭ್ಯಗಳನ್ನೂ ಘೋಷಿಸಿದೆ. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಶನಿವಾರ ಆಶಾ (ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತ) ಕಾರ್ಯಕರ್ತರಿಗೆ ಗ್ರಾಚ್ಯುಟಿ ಪಾವತಿಸಲು ಹಸಿರು ನಿಶಾನೆ ತೋರಿಸಿದ್ದಾರೆ. 30 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ನಿವೃತ್ತಿಯ ಸಮಯದಲ್ಲಿ ಪ್ರತಿಯೊಬ್ಬರಿಗೂ 1.5 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತರಿಗೆ ಗ್ರಾಚ್ಯುಟಿ ಪಾವತಿಸುವ ದೇಶದ ಮೊದಲ ಮತ್ತು ಏಕೈಕ ರಾಜ್ಯ ಆಂಧ್ರಪ್ರದೇಶವಾಗಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಎರಡು ಹೆರಿಗೆಗಳಿಗೆ 180 ದಿನಗಳವರೆಗೆ ಪಾವತಿಸಿದ ಹೆರಿಗೆ ರಜೆಯನ್ನು ಸರ್ಕಾರ ಘೋಷಿಸಿದೆ. ಈ ಪರಿಹಾರಗಳು ರಾಜ್ಯಾದ್ಯಂತ 42,752 ಆಶಾ ಕಾರ್ಯಕರ್ತರಿಗೆ ಪ್ರಯೋಜನವನ್ನು ನೀಡಲಿವೆ. ಗ್ರಾಮೀಣ ಪ್ರದೇಶಗಳಲ್ಲಿ 37,017 ಕಾರ್ಮಿಕರಿದ್ದರೆ, ನಗರ ಪ್ರದೇಶಗಳಲ್ಲಿ 5,735…