ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ…
Tag: asha workers protest
ಅತ್ಯಾಚಾರ ಕೊಲೆ ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು; ಆಶಾ ಕಾರ್ಯಕರ್ತೆಯರ ಸಂಘ
ಬೆಂಗಳೂರು: ಕೋಲ್ಕತ್ತಾದ ಆರ್ ಜಿ ಕರ್ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ನಡೆದ ಘೋರ ಅತ್ಯಾಚಾರ ಹಾಗೂ ಕೊಲೆಯನ್ನು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಖಂಡಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೆಳೆಸುವ ಈ ಘಟನೆ ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವಂತೆ ಮಾಡಿದೆ ಎಂದು ಸಂಘ ಹೇಳಿದೆ. ನಮ್ಮ ಸಮಾಜವು ಇಂದು ಅತ್ಯಂತ ತೀವ್ರ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಮಹಿಳೆಯರ ಮೇಲೆ ಅಪರಾಧಗಳು ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ, 12-13 ವರ್ಷದ ಮೂವರು ಶಾಲಾ ಮಕ್ಕಳು 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅವಳನ್ನು ಕೊಂದರು. ಮುಂಬೈನಲ್ಲಿ ಕೂಡ ಇದೇ ವಯಸ್ಸಿನ ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಕಲ್ಕತ್ತಾದ ವೈದ್ಯಕೀಯ ಕಾಲೇಜೊಂದರಲ್ಲಿ ಪಾತಕಿಗಳ…