ಅಹ್ಮದಾಬಾದ್: ಈ ಬಾರಿಯ ವಿಶ್ವಕಪ್ ಸರಣಿಯುದ್ದಕ್ಕೂ ಸೋಲಿಲ್ಲದ ಸರದಾರನಂತೆ ಮುನ್ನುಗ್ಗಿದ್ದ ಟೀಂ ಇಂಡಿಯಾ ಫೈನಲ್‌ನಲ್ಲಿ ಮುಗ್ಗರಿಸಿದೆ. ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ಮುಂದೆ ಶರಣಾದ ಭಾರತ ಈ ಬಾರಿಯೂ ವಿಶ್ವಕಪ್ ಗೆಲ್ಲುವಲ್ಲಿ ವಿಫಲವಾಯಿತು. ಭಾನುವಾರ ಅಹಮಾದಾಬಾದ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್‌ಗಳ ಸೋಲು ಅನುಭವಿಸಿತಿ. ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತಕ್ಕೆ ಬ್ಯಾಟಿಂಗ್ ಅವಕಾಶವನ್ನು ಬಿಟ್ಟುಕೊಟ್ಟಿತು. ನಿಗದಿತ 50 ಓವರುಗಳಲ್ಲಿ 240 ರನ್‌ಗಳಿಗೆ ಸರ್ವತನ ಕಂಡ ಟೀಂ ಇಂಡಿಯಾ ಆಸಿಸ್‌ಗೆ 432ರ ಸರಳ ಮೊತ್ತದ ಗುರಿಯನ್ನು ಒಡ್ಡಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ, ಇನ್ನೂ 40 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ಗುರಿ ಸಾಧಿಸಿತು. ಆಸ್ಚ್ರೇಲಿಯಾ ತಂಡ ಟ್ರಾವಿಸ್ ಹೆಡ್ ಶತಕ ಮತ್ತು ಲಬುಶೇನ್‌ರ ಅರ್ಧಶತಕದ ನೆರವಿನಿಂದ ಗುರಿ ತಲುಪಿ ಜಯಭೇರಿ ಭಾರಿಸಿತು. 7 ವಿಕೆಟ್‌ಗಳ ಭರ್ಜರಿ ಗೆಲುವು…