ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ನಿಯಮ ಪಾಲಿಸದೆ ಇದ್ದರೂ ಅನುಮತಿ ನೀಡಿದ್ದಾರೆ. ಹಾಗಾಗಿ ಈ ಪ್ರಕರಣ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ. ಪ್ರಕರಣ ವಿಚಾರಣೆಗೆ ಹೋದ ತಕ್ಷಣ ಇದಕ್ಕೆ ತಡೆಯಾಜ್ಞೆ ಸಿಗುತ್ತದೆ ಎಂದು ಬಿ.ಎಲ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಲ್. ಶಂಕರ್, ರಾಜಕೀಯ ಪ್ರೇರಿತ ನಡೆಯುವುದಕ್ಕೆ ಸಾಕಷ್ಟು ಉದಾಹರಣೆಗಳು ದೊರೆಯುತ್ತವೆ. ಎಲ್ಲಾ ನಿಯಮಗಳನ್ನು ಪಾಲಿಸಿ ಪ್ರಕರಣಕ್ಕೆ ಅನುಮತಿ ನೀಡಿ ಎಂದು ಕೇಳಿದಾಗ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಆದರೆ ಈಗ ನಿಯಮ ಪಾಲಿಸದೆ ಇದ್ದರೂ ಅನುಮತಿ ನೀಡಿದ್ದಾರೆ ಎಂದು ದೂರಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತನಿಖೆಗೆ ಅನುಮತಿ ನೀಡಿ ಎಂದು ಈ ಹಿಂದೆ ಕೇಳಿರುವ ನಾಲ್ಕು ಪ್ರಕರಣಗಳು ನಿಮ್ಮ ಮುಂದೆ ಬಾಕಿ ಇವೆ. ಕುಮಾರಸ್ವಾಮಿ, ಶಶಿಕಲಾ…