ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ…
Tag: b.s.yadiyurappa
BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ
ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಬಿಜೆಪಿ ಸಂಸದೀಯ ಸಮಿತಿ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಈ ಪಾದಯಾತ್ರೆ ಮಧ್ಯದಲ್ಲೇ ರಾಜೀನಾಮೆ ಕೊಡಲಿದ್ದಾರೆ ಎಂದರು. ಕುಂಟು ನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ ಅವರು ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.