ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ… ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ‘ ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ’ ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ…
Tag: B.Y.Vijayendra
ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವ ಪಕ್ಷದ ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರನ್ನು ಬುಧವಾರ ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಆ ಸುದ್ದಿ ಹರಡುತ್ತಿದ್ದಂತೆಯೇ ವಿಜಯೇಂದ್ರ ಬೆಂಬಲಿಗರು ಹಲವೆಡೆ ಸಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಈ ಬೆಳವಣಿಗೆ ಬಗ್ಗೆ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ‘ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ’ ಎಂದಿದ್ದಾರೆ. ‘ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು…
ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE — Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕೆ ತಕ್ಕಂತೆ…
ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನಿಟ್ರ್ಯಾಪ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿದರು. ಹನಿಟ್ರ್ಯಾಪ್ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ತಿಳಿಸಿದರು. ಹನಿಟ್ರ್ಯಾಪ್ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಹನಿಟ್ರ್ಯಾಪ್ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ… pic.twitter.com/AIeVECRVjV — BJP Karnataka (@BJP4Karnataka) March…
ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ವಾಗ್ವಾದದ ಅಖಾಡಕ್ಕಿಳಿದ ವಿಜಯೇಂದ್ರ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ…
ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?
ಬೆಂಗಳೂರು: ರಾಜ್ಯದಲ್ಲಿ ‘ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ’ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದೀಗ ಖಾಸಗಿ ಬಡಾವಣೆಗಳು ಸರ್ಕಾರದ ಅನುಮತಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರವು ಭ್ರಷ್ಟಾಚಾರವನ್ನು ವಿಧಾನ ಸೌಧದ ವರೆಗೂ ವಿಸ್ತರಿಸಿಕೊಳ್ಳುವ ಹುನ್ನಾರವೇ ಹೊರತು ಇದರ ಹಿಂದೆ ಯಾವ ಸದುದ್ದೇಶವೂ ಅಡಗಿಲ್ಲ ಎನ್ನುವುದು ಬಹಿರಂಗ ಸತ್ಯ ಎಂದಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರಗಳು ಬಹುತೇಕ ನಿಷ್ಕ್ರೀಯಗೊಂಡು ‘ನಿಂತ ನೀರಾಗಿವೆ’ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಬಡಾವಣೆ ನಿರ್ಮಿಸಲು ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಅಭಿವೃದ್ಧಿ ಪ್ರಾಧಿಕಾರಗಳಿಗೆ ಚುರುಕು ಮುಟ್ಟಿಸುವ ಗೋಜಿಗೇ ಹೋಗಿಲ್ಲ,ಇದರ ಪರಿಣಾಮವೇ ಮೈಸೂರು ಮುಡಾ ಹಗರಣದ ಕುಖ್ಯಾತಿ ಸಾಗರದಾಚೆಗೂ ಸದ್ದುಮಾಡಿದೆ ಎಂದವರು ವಿಶ್ಲೇಷಿಸಿದ್ದಾರೆ. ಸೂರಿಲ್ಲದ ಜನರು ಗೃಹ ನಿರ್ಮಾಣ ಸಹಕಾರ ಸಂಘಗಳ ಮೂಲಕ ಹಾಗೂ ಖಾಸಗಿ ನಿರ್ಮಾಣಕಾರರ ಮೂಲಕ…
ನಾಯಕರತ್ತ ‘ವಿಜಯೀ’ ನಡೆ; ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಯುವ ನಾಯಕ;
ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ದಕ್ಷ ಆಡಳಿತಕ್ಕೆ ಹೆಸರಾದ ನಾಡುಕಂಡ ಶ್ರೇಷ್ಠ ರಾಜಕಾರಣಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಅಪಾರ ಅನುಭವವುಳ್ಳ ಹಿರಿಯ ಮುತ್ಸದ್ದಿಗಳಾಗಿರುವ ತಾವು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ.ಕೃಷ್ಣಪ್ಪನವರು, ಶ್ರೀ ಸಿ.ಕೆ.ರಾಮಮೂರ್ತಿ ಅವರು… pic.twitter.com/xpYMWqixpp — Vijayendra Yediyurappa (Modi Ka Parivar) (@BYVijayendra) November 13, 2023 ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು ಶ್ರಮಿಸಿದ್ದಾರೆ ಎಂದು ತಿಳಿಸಿದರು. ಅವರು ಕಟ್ಟಿದ…
ಕುರ್ಚಿ ಏರುವ ಮುನ್ನವೇ ಮೈತ್ರಿ ಸರ್ಕಸ್.. ಬಿಜೆಪಿ ನಿಯೋಜಿತ ಅಧ್ಯಕ್ಷರಿಂದ ದೇವೇಗೌಡ ಭೇಟಿ
ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಮಾಜಿ ಪ್ರಧಾನಿಯವರ ಆಶೀರ್ವಾದ ಪಡೆದರು. ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು. ಎನ್‌ಡಿಎ ಸೇರಿರುವ ಜೆಡಿಎಸ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ಸಂಬಂಧ ಚರ್ಚೆ ನಡೆದಿದ್ದು, ಇದೀಗ ಬಿ.ವೈ.ವಿಜಯೇಂದ್ರ ಅವರು ತಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಲಂಕರಿಸುವ ಮುನ್ನ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಬೆಳವಣಿಗೆ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಂಡಿದೆ. ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ರನ್ನು ಅವರ…
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್
ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಮಳೆಯಾಗುತ್ತಿದೆ. ವಿಜಯೇಂದ್ರ ಅವರ ನೇಮಕವು ಬಿಜೆಪಿ ಪಾಲಿಗೆ ‘ವಿಜಯದ ಹಾದಿ’ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಣ್ಣಿಸಿದ್ದಾರೆ. ಟ್ವಿಟರ್‌ನಲ್ಲಿ ಅಭಿನಂದನೆಯ ಪೋಸ್ಟ್ ಹಾಕಿರುವ ಅವರು, ‘ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ’ ಎಂದು ಶುಭ ಹಾರೈಸಿದ್ದಾರೆ. ಅಭಿನಂದನೆಗಳು…
ಬಿಎಸ್‌ವೈ ಪುತ್ರ ‘ವಿಜಯೀಭವ’: ಬಿಜೆಪಿಯಲ್ಲಿ ರಣೋತ್ಸಾಹ..
ಗದಗ್: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಛಲಗಾರ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಗದಗ್‌ನ ಹುಯಿಲಗೋಳ ನಾರಾಯಣ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರಸಭಾ ಸದಸ್ಯರುಗಳಾದ ಸಾಯಿ ಸಮಿತಿ ಅಧ್ಯಕ್ಷರಾದ ಅನಿಲ ಅಬ್ಬಿಗೇರಿ.ಮಧುಸಾ ಮೆಹರ್ವಾಡಿ. ವಿನಾಯಕ ಮಾನ್ವಿ.ನಾಗರಾಜ್ ತಲ್ವಾರ್. ಮಾಂತೇಶ್ ನೆಲವಡಿ. ಎಂ ಎಂ ಹಿರೇಮಠ. ಕಾಂತಿಲಾಲ್ ಬಂಸಾಲಿ. ಸುಧೀರ್ ತಾಟಿಗರ್.…