ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಇಂದು ಶಿವಮೊಗ್ಗಕ್ಕೆ ಆಗಮಿಸಿದ ಬಿ.ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಅಭಿನಂದನಾ ಸಮಾರಂಭಕ್ಕೂ ಮುನ್ನ ನಡೆದ ಭವ್ಯ ಮೆರವಣಿಗೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಸಾವಿರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷರನ್ನು ಬರಮಾಡಿಕೊಂಡರು. ಮೆರವಣಿಗೆ ಮೂಲಕ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರ ಅವರನ್ನು ಜಿಲ್ಲಾಧ್ಯಕ್ಷರಾದ ಟಿ. ಡಿ. ಮೇಘರಾಜ್ ರವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಪ್ರಮುಖರು ಕಾರ್ಯಕರ್ತರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.