ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. “ಸಿಟಿಜನ್ ರೈಟ್ಸ್ ಫೌಂಡೇಷನ್” ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯಿಂದ ಭೂಸ್ವಾಧೀನ ಆದೇಶವಾಗಿದೆ. ಈ ಭೂಸ್ವಾಧೀನ ಪ್ರಕ್ರಿಯೆಯ ದಾಖಲೆಗಳನ್ನು ಗಮನಿಸಿದಾಗ ಅರ್ಹರಲ್ಲದವರ ಹೆಸರಿಗೆ ಹಣ ಸಂದಾಯ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ದೇವನಹಳ್ಳಿ ತಾಲೂಕಿನ ಸುತ್ತಮುತ್ತ ನೂರಾರು ಎಕರೆ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಲು…