ಬೆಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ತಿನಲ್ಲಿ ಅಂಗೀಕರವಾಗಿರುವ ಬಗ್ಗೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಅವರ ಪ್ರತಿಕ್ರಿಯೆ ಗಮನಸೆಳೆದಿದ್ದಾರೆ. ಅತ್ತ, ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ, ವಕ್ಫ್ ವಿರುದ್ದದ ಹೋರಾಟ ಬೆಂಬಲಿಸಿದವರಿಗೆ ಯತ್ನಾಳ್ ಧನ್ಯವಾದ ಸಮರ್ಪಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ. ವಕ್ಫ್ ಕಾಯ್ದೆಯ ತಿದ್ದುಪಡಿಗೆ ಗೆ ಜಂಟಿ ಸಂಸತ್ ಸಮಿತಿ ರಚಿಸಿ ತಿದ್ದುಪಡಿಗೆ ಸೂಚಿಸಿದ ಕೇಂದ್ರ ಸರ್ಕಾರಕ್ಕೂ, ಜೆ.ಪಿ.ಸಿ ಅಧ್ಯಕ್ಷರಿಗೂ, ಸದಸ್ಯರಿಗೂ ಸೇರಿದಂತೆ ತಿದ್ದುಪಡಿಗೆ ಕಾರಣೀಭೂತರಾದ ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು ಎಂದು ಶಾಸಕ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ತಿದ್ದುಪಡಿಯಿಂದ ರೈತರಿಗೆ, ಮಠಗಳಿಗೆ, ದೇವಸ್ಥಾನಗಳಿಗೆ, ಸರ್ಕಾರಿ ಭೂಮಿ ಹಾಗೂ ಜನ ಸಾಮಾನ್ಯರ ಭೂಮಿಯನ್ನು ವಕ್ಫ್ ಎಂದು ಘೋಷಿಸಲು ಸಾಧ್ಯವಿಲ್ಲ ಹಾಗೂ ಜಿಲ್ಲಾಡಳಿತ ಮತ್ತು ನ್ಯಾಯಾಲಯಗಳಷ್ಟೇ ಇದನ್ನು ತೀರ್ಮಾನಿಸಬಹುದು. ನಮ್ಮ…
Tag: Basanagouda Patil Yatnal
ಯತ್ನಾಳ್ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ
ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಹೈಕಮಾಂಡ್ ನಿರ್ಧಾರದ ವಿರುದ್ಧ ಪಂಚಮಸಾಲಿ ಸಮಾಜ ಸಿಡಿದೆದ್ದಿದೆ. ಯತ್ನಾಳ್ ಅವರ ಉಚ್ಚಾಟನೆ ಖಂಡಿಸಿ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆಗೆ ಬಿ.ಎಸ್.ಯಡಿಯೂರಪ್ಪ ಮತ್ತವರ ಕುಟುಂಬವೇ ಕಾರಣ ಎಂದು ದೂರಿದರು. ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದು ತಮ್ಮ ಸಮೈದಾಯದ ಶಾಸಕನ ಬೆನ್ನಿಗೆ ನಿಂತಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆ ಆದೇಶವನ್ನು ಹೈಕಮಾಂಡ್ ವಾಪಸ್ ಪಡೆಯಬೇಕು.…