ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ‘ಯುವ ಸಂಕಲ್ಪ’ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು. ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ.…