ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು. ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಬೊಮ್ಮಾಯಿ ಸ್ಪರ್ಧಿಸ್ತಾರ? ಮಾಜಿ ಸಿಎಂ ಹೇಳಿದ್ದು ಹೀಗೆ

ಹಾವೇರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಲವಾರು ಸಂಸದರಿಗೆ ಬಿಜೆಪಿ ಟಿಕೆಟ್ ಸಿಗಲ್ಲ ಎಂಬ ಮಾತುಗಳು ಹರಿದಾಡುತ್ತಿವೆ. ಇದೇ ವೇಳೆ, ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆ ಸಾಗಿವೆ. ಇದೇ ವೇಳೆ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.‌ ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಹಾವೇರಿ ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿದ್ದೆವೆ. ಪಕ್ಷದ ಅಧ್ಯಕ್ಷರು ಪದಾದಿಕಾರಿಗಳು ಸೇರಿ ತಂಡ ಮಾಡಿ ಕೋರ್ ಸಮಿತಿ ಮಾಡಬೇಕು ಎಂಬ ನಿರ್ಣಯ ಆಗಿತ್ತು.…