ಬೆಂಗಳೂರು : ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಳ್ಳಾರಿ ಮೂಲದ ಚಿನ್ನ ವ್ಯಾಪಾರಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ದಂಧೆ ಬೇಧಿಸುತ್ತಿರುವ ಡಿಆರ್‌ಐ ಅಧಿಕಾರಿಗಳು ಬಂಧಿತ ಆರೋಪಿ ತರುಣ್ ನೀಡಿದ ಸುಳಿವನ್ನಾಧರಿಸಿ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರೀ ಸಾಹಿಲ್ ಜೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.