‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯ ಟ್ವೀಟ್‌ಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡೊರುವ ರಾಮಲಿಂಗಾರೆಡ್ಡಿ, ‘ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತ. ಆದರೂ ನಮ್ಮ‌ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ’ ಎಂದಿದ್ದಾರೆ. ಕರ್ನಾಟಕ ಸರ್ಕಾರವು 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಸಂಸ್ಥೆಗಳ‌…