ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಂಗಳೂರು: ‘ಎತ್ತಿನಹೊಳೆ ಯೋಜನೆ’ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಬಹಿರಂಗ ಪತ್ರ ತೀವ್ರ ಕುತೂಹಲ ಕೆರಳಿಸಿದೆ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಉಪಮುಖ್ಯಮಂತ್ರಿಗಳು ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿರುವ ಅವರು, ಕೆಲವು ಪ್ರಶ್ನೆಗಳನ್ನು ಸಿಎಂ ಅವರ ಮುಂದಿಟ್ಟಿದ್ದಾರೆ. ಆರಂಭದಲ್ಲಿ ಈ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು. 38 ಪಟ್ಟಣಗಳಿಗೆ, 6657 ಗ್ರಾಮಗಳಿಗೆ, 527 ಕೆರೆ ತುಂಬಿಸುವುದು, 75 ಲಕ್ಷ ಜನರಿಗೆ, ಶುದ್ಧ ಕುಡಿಯುವ…

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಲೂಟಿ ನಿಮ್ಮ ಸರಕಾರಕ್ಕೆ ಕಪ್ಪು ಚುಕ್ಕಿ ಅಲ್ಲವೇ? ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾಯಿದೆ ಉಲ್ಲಂಘಿಸಿ, ನಿಯಮ ಉಲ್ಲಂಘನೆ ಮಾಡಿ ಒಂದೇ ಕಂಪೆನಿಗೆ 600 ಕೋಟಿಯ ಟೆಂಡರ್ ಕೊಟ್ಟಿರುವುದು ಕಪ್ಪುಚುಕ್ಕಿ ಅಲ್ಲವೇ? ಎಂಬ ಪ್ರಶ್ನೆಯನ್ನು ಮುಂದಿಟ್ಟರು. ಪೊಲೀಸ್, ಕಂದಾಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಪ್ರತಿ ಹುದ್ದೆಗೆ ರೇಟ್ ಕಾರ್ಡ್ ನಿಗದಿ ಮಾಡಿರುವುದು, ಸಬ್ ರಿಜಿಸ್ಟಾçರ್‌ಗಳ ಹುದ್ದೆಯ ನೇಮಕಾತಿಗೆ ಬಹಿರಂಗ ಹರಾಜು, ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಗೆ ದರ ನಿಗದಿ ಮಾಡಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಆರ್‌ಟಿಒಗಳ ಬಹಿರಂಗ ಹರಾಜು…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಮಳೆಯಾಗುತ್ತಿದೆ. ವಿಜಯೇಂದ್ರ ಅವರ ನೇಮಕವು ಬಿಜೆಪಿ ಪಾಲಿಗೆ ‘ವಿಜಯದ ಹಾದಿ’ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಣ್ಣಿಸಿದ್ದಾರೆ. ಟ್ವಿಟರ್‌ನಲ್ಲಿ ಅಭಿನಂದನೆಯ ಪೋಸ್ಟ್ ಹಾಕಿರುವ ಅವರು, ‘ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ’ ಎಂದು ಶುಭ ಹಾರೈಸಿದ್ದಾರೆ. ಅಭಿನಂದನೆಗಳು…

ರಾಜ್ಯದ ಜನರ ದಾರಿ ತಪ್ಪಿಸಲು ‘ಹುಲಿಯ ಉಗುರು’ ನಾಟಕ? ಸರ್ಕಾರದ ವಿರುದ್ಧ ರವಿ ವಾಗ್ಬಾಣ

ಬೆಂಗಳೂರು: ಇತ್ತೀಚಿಗೆ ನಡೆದ ಐಟಿ ದಾಳಿ, ಅಲ್ಲಿ ಪತ್ತೆಯಾದ ನೂರು ಕೋಟಿಗೂ ಅಧಿಕ ಅಕ್ರಮ ಹಣದ ಕುರಿತಾದ ಚರ್ಚೆಯನ್ನು ದಾರಿತಪ್ಪಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಪೂರ್ಣ ವಿರಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಮಿಷನ್ ಕಲೆಕ್ಟರ್ (CM) ಮತ್ತು ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಆರಂಭಿಸಿರುವ ಹೊಸ ನಾಟಕ “ಹುಲಿ ಉಗುರು” ಎಂದು ಬಿಜೆಪಿ ನಾಯಕ ಸಿ.ಟಿ.ರವಿ ವಿಶ್ಲೇಷಿಸಿದ್ದಾರೆ. ನೂರಾರು ವರ್ಷಗಳಿಂದ ಹುಲಿಯುಗುರನ್ನು ಬಹಳ ಜನ ರಾಜ್ಯದಾದ್ಯಂತ (ದೇಶದಾದ್ಯಂತ) ಆಭರಣವಾಗಿ ಧರಿಸುತಿದ್ದದ್ದು ಹೊಸದೂ ಅಲ್ಲ, ಅರಣ್ಯ ಇಲಾಖೆಯ ಅಧಿಕಾರಿಗಳು ಕಾಣದೆ ಇದ್ದದ್ದೂ ಅಲ್ಲ. ಈಗ ಸರ್ಕಾರದ ಆಡಳಿತಾತ್ಮಕ ವೈಫಲ್ಯ, ಬೋಗಸ್ ಭರವಸೆಗಳ ಮೇಲಿನ ಜನರ ಆಕ್ರೋಶ, ರೈತರಿಗೆ ವಿದ್ಯುತ್ ಪೂರೈಸಲಾಗದೆ ನೀಡಿದ ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ನಿಮ್ಮ ಸರಕಾರದ ಮಂತ್ರಿಗಳು ತೆರೆದ ನಕಲಿ ದಾಖಲೆಗಳ ಇಲಾಖೆ, ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಬೇಗುದಿ ಮತ್ತು…

ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾದ KPCC: ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ 60 ಲಂಚ ಕೇಳಿದಂತಾಗಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡ ಭಾಸ್ಕರ ರಾವ್ ಉಪಸ್ಥಿತಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿರಿಯ ಸಂಸ್ಕøತಿ ಪುತ್ರನ ಬಳಿ ಶೇ 60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರದಡಿ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ಸಿ.ಟಿ.ರವಿ…

ನೀರು ಬಿಡಲು ಬೆದರಿಕೆ ಇತ್ತೇ? ಕಾಂಗ್ರೆಸ್ ಒತ್ತಡ ಇದ್ದೀತೇ?: ಸಿ.ಟಿ.ರವಿ

ಬೆಂಗಳೂರು: ತಮಿಳುನಾಡಿಗೆ ಮುಂಚಿತವಾಗಿಯೇ ನೀರು ಬಿಡಲು ನಿಮಗೇನಾದರೂ ಬೆದರಿಕೆ ಇತ್ತೇ? ಪಾರ್ಟಿಯಿಂದ ಒತ್ತಡ ಇತ್ತೇ? ಬೇಡಿಕೆ ಇಡುವ ಮೊದಲೇ ನೀರು ಬಿಟ್ಟಿದ್ದೇಕೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂಡಿಯ ಮೈತ್ರಿಕೂಟದ ಭಾಗವಾಗಲು ನೀರು ಬಿಡಿ ಎಂದು ಡಿಎಂಕೆ ಬೆದರಿಕೆ ಹಾಕಿರಬಹುದು. ಇಲ್ಲವೇ ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹಾಕಿರಬಹುದು ಎಂದು ಸಂಶಯ ವ್ಯಕ್ತಪಡಿಸಿದರು. ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ, ಸಂಸದರ ಸಭೆ ನಡೆಸಿದ್ದನ್ನೂ ಅವರು ಟೀಕಿಸಿದರು. ಬಳಿಕ ಅಹವಾಲು ಮಂಡನೆಯನ್ನು ಆಕ್ಷೇಪಿಸಿದರು. ರಾಜ್ಯದ ರೈತರ ಸಂಕಷ್ಟ ದೂರ ಮಾಡುವುದರ ಬದಲು ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯುವ ಪ್ರಯತ್ನ ಇದ್ದಂತಿದೆ. ಇದಕ್ಕೆ ಕರ್ನಾಟಕ ಬಲಿಪಶು ಆಗಿದೆ ಎಂದು ಸಿ.ಟಿ.ರವಿ ಅಭಿಪ್ರಾಯಪಟ್ಟರು. ಕಾಂಗ್ರೆಸ್ ಸರಕಾರವು ಕಾವೇರಿ…

ಸುಧಾಕರರನ್ನು ಸಚಿವ ಸ್ಥಾನದಿಂದ ಕೈಬಿಡಿ: ಸಿ.ಟಿ.ರವಿ

ಬೆಂಗಳೂರು: ದಲಿತರ ಆಸ್ತಿ ಕಬಳಿಸಿ ದೌರ್ಜನ್ಯ ನಡೆಸಿದ್ದಾರೆಂದು ಕಾಂಗ್ರೆಸ್ ಸಚಿವ ಡಿ.ಸುಧಾಕರ್ ಅವರ ಮೇಲೆ ದೂರು ದಾಖಲಾಗಿದೆ. ಸಚಿವರ ಮೇಲೆ ದೂರು ದಾಖಲಾಗಿ ಮೇಲ್ನೋಟಕ್ಕೆ ಸತ್ಯವಿದೆ ಎಂದು ಕಂಡುಬಂದಾಗ ನಿಷ್ಪಕ್ಷಪಾತ ತನಿಖೆಗಾಗಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಬಳಿಕ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯ. ಆದ್ದರಿಂದ ಅವರನ್ನು ಸಚಿವಸಂಪುಟದಿಂದ ಕೈಬಿಡಿ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಗ್ರಹಿಸಿದ್ದಾರೆ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸದಾ ಕಾಲ ದಲಿತರ ಪರ ಎನ್ನುವ ಮಹದೇವಪ್ಪ ಹಾಗೂ ಸಿಎಂ, ಗೃಹಸಚಿವರ ಸೇರಿ ಎಲ್ಲ ಖಾತೆಗಳ ಜಿಪಿಎ ಪಡೆದ ಪ್ರಿಯಾಂಕ್ ಖರ್ಗೆಯವರು ಈ ವಿಷಯದಲ್ಲಿ ಮೌನವಾಗಿದ್ದಾರೆ. ಅವರ ಮೌನ ಹಲವು ಅನುಮಾನಗಳನ್ನು ಸೃಷ್ಟಿಸುತ್ತದೆ. ಅವರು ಮೌನ ವಹಿಸಬಾರದೆಂದು ಒತ್ತಾಯಿಸಿದರು. 4 ತಿಂಗಳಾದರೂ ವರ್ಗಾವಣೆ ಗೊಂದಲ ಬಗೆಹರಿದಿಲ್ಲ. 115 ಪೊಲೀಸ್ ಅಧಿಕಾರಿಗಳಿಗೆ ಜಾಗ ತೋರಿಸದೆ, ಕೆಲಸವನ್ನೂ…