ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿಂದ ಹೋಗಿದ್ದ ಟೋಲ್ ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ” ಎಂದು ಆರೋಪಿಸಿದರು. “ಮುಂದೆ…