KRSನಿಂದ ಒಂದು ಹನಿ ನೀರು ಬಿಡುವುದಿಲ್ಲ: ಸರ್ಕಾರದ ಸ್ಪಷ್ಟನೆ

ಬೆಂಗಳೂರು:”3,000 ಸಾವಿರ ಕ್ಯೂಸೆಕ್ಸ್ ನೀರಿನಲ್ಲಿ ಕೆಆರ್‌ಎಸ್‌ ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ರಾಜಿಯಾಗುವುದಿಲ್ಲ. ಮಂಡ್ಯ ಭಾಗದ ರೈತರ ಹಿತ ಮುಖ್ಯ” ಎಂದರು. 12,500 ಕ್ಯೂಸೆಕ್ಸ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು, ನಿಮ್ಮ ಹೋರಾಟದಿಂದ ಸಮಿತಿ 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದೆ. ಮತ್ತೊಮ್ಮೆ ಹೋರಾಟ ಏತಕ್ಕೆ ಎಂದರು. ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ, ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ ಬಂದ್ ಬೇಡ…

ನಮ್ಮ ನೀರು ನಮ್ಮ ನೀರು ಎಂದವರು ನೆರೆರಾಜ್ಯಕ್ಕೆ ನೀರು ಬಿಟ್ಟಿದ್ದು ಯಾಕೆ?  HDK ಪ್ರಶ್ನೆ

ರಾಮನಗರ: ನೀರು ಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್‌ʼಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರ್ಕಾರ ಬೆದರಿ ಕಾವೇರಿ ನೀರನ್ನು ನೆರೆರಾಜ್ಯಕ್ಕೆ ಹರಿಸಿದ್ದೇಕೆ? ನ್ಯಾಯಾಲಯಕ್ಕೆ ತನ್ನ ಆಕ್ಷೇಪವನ್ನು ಏಕೆ ಸಲ್ಲಿಕೆ ಮಾಡಲಿಲ್ಲ. ನಮ್ಮ ರಾಜ್ಯದಲ್ಲಿರುವ ಜಲ ಸಂಕಷ್ಟದ ಬಗ್ಗೆ ಏಕೆ ಮನವರಿಕೆ ಮಾಡಿಕೊಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀರು ಬಿಟ್ಟ ವಿಷಯ ಗೊತ್ತಾದ ಕೂಡಲೇ ವಿರೋಧ ಮಾಡಿ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯ ಮಾಡಿದೆ. ಈಗ ಸರ್ವಪಕ್ಷ ಸಭೆ ಕರೆಯುತ್ತೇವೆ, ಸುಪ್ರೀಂ ಕೋರ್ಟ್‌ʼಗೆ ಅರ್ಜಿ ಹಾಕುತ್ತೇವೆ ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಅದನ್ನೇ ನೀರು ಬಿಡುವುದಕ್ಕೆ ಮೊದಲೇ ಮಾಡಬಹುದಿತ್ತು ಅಲ್ಲವೆ? ಎಂದು ಪ್ರಶ್ನಿಸಿದರು. ʼನಮ್ಮ ನೀರು ನಮ್ಮ ಹಕ್ಕುʼ ಎಂದು ಜಾಗಟೆ ಹೊಡೆದುಕೊಂಡು ಊರೂರು ತಿರುಗಾಡಿದರು, ರಾಮನಗರದಲ್ಲಿ ಗೋಡೆಗಳ ಮೇಲೆ ಸ್ಲೋಗನ್ ಬರೆದುಕೊಂಡಿದ್ದರು. ನೀರಿನ…