ಕಾವೇರಿ ವಿವಾದ: ತಮಿಳುನಾಡಿಗೆ ನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWRC ಮತ್ತೊಮ್ಮೆ ಆದೇಶ

ದೆಹಲಿ: ತಮಿಳುನಾಡಿಗೆ ಮರ್ತಷ್ಟು ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC) ಕರ್ನಾಟಕಕ್ಕೆ ಇಂದು ಮತ್ತೆ ನಿರ್ದೇಶನ ನೀಡಿದೆ. ತಮಿಳುನಾಡಿಗೆ ನೀರು ಹರಿಸಬೇಕೆಂದು ಈ ಹಿಂದೆ ನೀಡಿದ್ದ ಆದೇಶದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಆದೇಶಿಸಿದೆ‌. ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಡಿಸೆಂಬರ್​ ಅವಧಿಯಲ್ಲಿ 6 ಟಿಎಂಸಿ ನೀರು ಹರಿಸಬೇಕಿದೆ. ಜೊತೆಗೆ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಹರಿಸಬೇಕೆಂದು ತಮಿಳುನಾಡು ಸರ್ಕಾರ ಬೇಡಿಕೆ ಇ್ಟಿದೆ. ಆದರೆ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಸರ್ಕಾರ ವಾದ ಮಂಡಿಸಿದೆ. ವಾದವನ್ನು ಆಲಿಸಿದ ಪ್ರಾಧಿಕಾರ, ಕರ್ನಾಟಕಕ್ಕೆ ನವೆಂಬರ್ 23ರಿಂದ ಡಿಸೆಂಬರ್…