ಮೈಸೂರು: ಕಾವೇರಿ ನದಿ ನೀರು ವಿಚಾರದಲ್ಲಿ ಯಾವ ಒತ್ತಡಕ್ಕೂ ಮಣಿಯದೆ ನುಡಿದಂತೆ ನಡೆಯಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಧಿಕ್ಕರಿಸಬೇಕು, ಯಾವುದೇ ಕಾರಣಕ್ಕೂ ನೀರು ಬಿಡುವ ನಿರ್ಧಾರ ಮಾಡಬಾರದು ಬೆಂಗಳೂರು, ಮೈಸೂರು, ನಗರದ ಜನ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ನಿಮ್ಮ ಕ್ಷೇತ್ರದ ಶಾಸಕರ ಗಮನ ಸೆಳೆಯುವ ಹೋರಾಟ ನಡೆಸಬೇಕು ಎಂದಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ನೀರು ಬಿಡುವುದಿಲ್ಲ ಎನ್ನುವ ತೀರ್ಮಾನ ಕೈಗೊಂಡಿದೆ ನುಡಿದಂತೆ ನಡೆದುಕೊಳ್ಳಬೇಕು ಇಂದಿನ ಪರಿಸ್ಥಿತಿಯಲ್ಲಿ ಜಲಾಶಯಗಳು ಖಾಲಿಯಾಗಿದೆ, ನೀರು ಬಿಡುವುದಿಲ್ಲ ಎನ್ನುವ ಬದ್ಧತೆಯನ್ನು ತೋರಬೇಕು ಆದೇಶ ಧಿಕ್ಕರಿಸಬೇಕು ರಾಜ್ಯದ ಜನರ ಹಿತ ರಕ್ಷಣೆಗಾಗಿ ಸರ್ಕಾರ ಕೆಲಸ ಮಾಡಬೇಕು ಈಗಾಗಲೇ ಕಾವೇರಿ ಅಚ್ಚುಕಟ್ಟು ಭಾಗದ ರೈತರ…
Tag: Cauvery water dispute’ Kuruburu shanthakumar reaction
ನಮ್ಮ ನೀರು ನಮ್ಮ ನೀರು ಎಂದವರು ನೆರೆರಾಜ್ಯಕ್ಕೆ ನೀರು ಬಿಟ್ಟಿದ್ದು ಯಾಕೆ? HDK ಪ್ರಶ್ನೆ
ರಾಮನಗರ: ನೀರು ಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್ʼಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರ್ಕಾರ ಬೆದರಿ ಕಾವೇರಿ ನೀರನ್ನು ನೆರೆರಾಜ್ಯಕ್ಕೆ ಹರಿಸಿದ್ದೇಕೆ? ನ್ಯಾಯಾಲಯಕ್ಕೆ ತನ್ನ ಆಕ್ಷೇಪವನ್ನು ಏಕೆ ಸಲ್ಲಿಕೆ ಮಾಡಲಿಲ್ಲ. ನಮ್ಮ ರಾಜ್ಯದಲ್ಲಿರುವ ಜಲ ಸಂಕಷ್ಟದ ಬಗ್ಗೆ ಏಕೆ ಮನವರಿಕೆ ಮಾಡಿಕೊಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀರು ಬಿಟ್ಟ ವಿಷಯ ಗೊತ್ತಾದ ಕೂಡಲೇ ವಿರೋಧ ಮಾಡಿ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯ ಮಾಡಿದೆ. ಈಗ ಸರ್ವಪಕ್ಷ ಸಭೆ ಕರೆಯುತ್ತೇವೆ, ಸುಪ್ರೀಂ ಕೋರ್ಟ್ʼಗೆ ಅರ್ಜಿ ಹಾಕುತ್ತೇವೆ ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಅದನ್ನೇ ನೀರು ಬಿಡುವುದಕ್ಕೆ ಮೊದಲೇ ಮಾಡಬಹುದಿತ್ತು ಅಲ್ಲವೆ? ಎಂದು ಪ್ರಶ್ನಿಸಿದರು. ʼನಮ್ಮ ನೀರು ನಮ್ಮ ಹಕ್ಕುʼ ಎಂದು ಜಾಗಟೆ ಹೊಡೆದುಕೊಂಡು ಊರೂರು ತಿರುಗಾಡಿದರು, ರಾಮನಗರದಲ್ಲಿ ಗೋಡೆಗಳ ಮೇಲೆ ಸ್ಲೋಗನ್ ಬರೆದುಕೊಂಡಿದ್ದರು. ನೀರಿನ…
ರಾಜ್ಯದ ರೈತರ ಹಿತಶಕ್ತಿ ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುವುದು ರೈತದ್ರೋಹಿ ಕಾರ್ಯ
ಬೆಂಗಳೂರು: ರಾಜ್ಯದ ರೈತರ ಹಿತಶಕ್ತಿ ಬಲಿಕೊಟ್ಟು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದು ರೈತದ್ರೋಹಿ ಕಾರ್ಯ ಎಂದು ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಕಾವೇರಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಬೆಳೆ ಬೆಳೆಯಲು ಸಂಪೂರ್ಣವಾಗಿ ನೀರುಹರಿಸಬೇಕೆಂದು ಒತ್ತಾಯಿಸಿದಾಗ ಮೈಸೂರಿನಲ್ಲಿ 14ನೇ ತಾರೀಕು ಪ್ರತಿಭಟನೆ ಮಾಡಿ ಅದೇ ದಿನ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಕರೆದಿದ್ದರು. ಸಭೆಯಲ್ಲಿ ನಾವು ತಮಿಳುನಾಡಿಗೆ ಬಿಡುವ ಬದಲು ರಾಜ್ಯದ ರೈತರ ಹಿತಾಸಕ್ತಿ ಕಾಪಾಡಿ ಎಂದು ವಿರೋಧ ವ್ಯಕ್ತಪಡಿಸಿದ್ದೇವೆ ಎಂದವರು ಹೇಳಿದ್ದಾರೆ. ನಮ್ಮ ರೈತರ ಬಲಿಕೊಟ್ಟು ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ. ಕೂಡಲೇ ಕಾವೇರಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಬೆಳೆ ಬೆಳೆಯಲು ನೀರು ಹರಿಸಬೇಕು. ಸರ್ಕಾರ ನಾಟಕೀಯವಾಗಿ ವರ್ತಿಸದೆ ರಾಜ್ಯದ ರೈತರ ಹಿತ ಕಾಪಾಡಬೇಕು. ಮಳೆ ಪ್ರಮಾಣ ಕಡಿಮೆಯಾಗಿರುವ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವಿ ಮಾಡಿ ರಾಜ್ಯದ ರೈತರ ಹಿತಶಕ್ತಿ ಕಾಪಾಡಬೇಕು…