ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಗ್ಯಾಂಗ್ ಬಂಧನದಲ್ಲಿರುವಂತೆಯೇ ಮತ್ತಷ್ಟು ಮಂದಿಯ ಪಾತ್ರಗಳ ಬಗ್ಗೆ ಸಿಸಿಬಿ ಪೊಲೀಸರು ಜಾಲಾಡುತ್ತಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿರುವ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಉದ್ಯಮಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ವಂಚಿಸಲಾಗಿದೆ ಎಂಬ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಕಾರ್ಯಕರ್ತೆ ಎಂದು ಘೋಷಿಸಿಕೊಂಡಿರುವ ಚೈತ್ರಾ ಕುಂದಾಪುರ, ಬಿಜೆಪಿ ನಾಯಕರಾಗಿದ್ದ ಗಗನ್ ಕಡೂರು, ಅಭಿನವ ಹಲಶ್ರೀ ಸ್ವಾಮೀಜಿ ಸೇರಿದಂತೆ ಆರು ಮಂದಿ ಇದೀಗ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಹಿಂದುತ್ವವಾದಿ ಸ್ವಾಮೀಜಿ ಎಂದೇ ಬಿಂಬಿತವಾಗಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೂ ಕೂಡಾ ಸಿಸಿಬಿ ನೋಟಿಸ್ ನೀಡಿದೆ. ಈ ನಡುವೆ, ಈ ಪ್ರಕರಣಕ್ಕೂ ಸ್ವಾಮೀಜಿಗೂ ಯಾವುದೇ ಸಂಬಂಧವಿಲ್ಲ ಎಂಬ ವಿಚಾರ ಪೊಲೀಸರಿಗೂ ತಿಳಿದಿದೆ ಎನ್ನಲಾಗಿದ್ದು, ಆದರೂ…
Tag: Chaitra Kundapura Case
ಹಿಂದೂತ್ವವೇ ವಂಚನೆಗೆ ‘ಚೈತ್ರಾ’ಸ್ತ್ರ..! ಹಣ ವಾಪಸ್ ಕೇಳಿದರೆ ಅತ್ಯಾಚಾರ ಕೇಸ್ ಬೆದರಿಕೆ..?
ಬೆಂಗಳೂರು: ಹಿಂದೂ ಸಂಘಟನಗಳ ಕಾರಗಯಕರ್ತೆ ಎಂದು ಹೇಳಿಕೊಂಡು ಪ್ರಚೋದನಕಾರಿ ಭಾಷಣ ಮಾಡುತ್ತಾ ಹಿಂದೂ ಕಾರ್ಯಕರ್ತರ ಗಮನಸೆಳೆಯುತ್ತಿದ್ದ ಚೈತ್ರಾ ಕುಂದಾಪುರ ಇದೀಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಚೈತ್ರಾ ಅವರ ಸಾಲು ಸಾಲು ವಂಚನೆ ಪುರಾಣ ಬಯಲಾಗುತ್ತಿದ್ದು, ಅವರು ಬಂಧನದಲ್ಲಿದ್ದಾಗಲೇ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತನಿಗೆ ವಂಚಿಸಿದ್ದಾರೆನ್ನಲಾದ ಚೈತ್ರಾ ಕುಂದಾಪುರ, ವಂಚನೆಗೊಳಗಾದವರು ಹಣ ವಾಪಸ್ ಕೇಳಿದರೆ ಅತ್ಯಾಚಾರ ಕೇಸ್ ದಾಖಲಿಸುವುದಾಗಿ ಬೆದರಿಕೆಯೊಡ್ಡಿದ್ದಾರಂತೆ. ಇದೇ ಅಂಶಗಳನ್ನು ಉಲ್ಲೇಖಿಸಿ ಉಡುಪಿ ಜಿಲ್ಲೆ ಕೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ರಹ್ಮಾವರ ಸಮೀಪದ ಸುದೀನ ಎಂಬವರು ಕೋಟಾ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಈ ಎಫ್‌ಐಆರ್ ದಾಖಲಾಗಿದೆ. ಏನಿದು ವಂಚನೆ ಪುರಾಣ? ಹಿಂದೂ ಕಾರ್ಯಕರ್ತರನ್ನೇ ಚೈತ್ರಾ ವಂಚಿಸುತ್ತಿದ್ದರಾ? ಚೈತ್ರಾ ಕುಂದಾಪುರ ಅವರಿಗೆ ಹಿಂದೂ ಕಾರ್ಯಕರ್ತರೇ ಟಾರ್ಗೆಟ್? ಎಂಬ ಪ್ರಶ್ನೆ ಉದ್ಭವವಾಗಿದೆ. ಅದಕ್ಕೆ ಪುಷ್ಟಿ ನೀಡಿರುವ ಕೋಟಾ ಕೇಸ್ ಕೂಡಾ ಬೆಂಗಳೂರಿನಲ್ಲಿ ದಾಖಲಾಗಿರುವ…
ಚೈತ್ರಾ ಕೇಸ್; ಹೆಜ್ಜೆ ಜಾಡು ಬೆನ್ನತ್ತಿ ಕೋಟಿ ರೂಪಾಯಿ ಆಸ್ತಿ ದಾಖಲೆ, ಝಣ-ಝಣ ಕಾಂಚಾಣ ಪತ್ತೆ ಮಾಡಿದ ರೀನಾ ಟೀಮ್
ಬೆಂಗಳೂರು: ಬೆಂಗಳೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡುವುದಾಗಿ ನಂಬಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರಿಗೆ ಸೇರಿದ್ದೆನ್ನಲಾದ ಚಿನ್ನಾಭರಣ, ನಗದು ಸಹಿತ ಆಸ್ತಿ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಬಂಡೆಪಾಳ್ಯದಲ್ಲಿ ದಾಖಲಾಗಿರುವ ಈ ಪ್ರಕರಣ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಸರಣಿ ಕಾರ್ಯಾಚರಣೆ ಸಾಗಿದೆ. ಇದೇ ಸಂದರ್ಭದಲ್ಲಿ ಸರ್ಚ್ ವಾರೆಂಟ್ ಪಡೆದು ಅಖಾಡಕ್ಕೆ ಧುಮುಕಿರುವ ರೀನಾ ಸುವರ್ಣ ನೇತೃತ್ವದ ಸಿಸಿಬಿ ತಂಡ ಕರಾವಳಿಜಿಲ್ಲೆಯಲ್ಲಿ ನಡೆಸಿರುವ ಕಾರ್ಯಾಚರಣೆ ಕುತೂಹಲದ ಕೇಂದ್ರಬಿಂದುವಾಯಿತು. 3.5 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಗ್ಯಾಂಗ್ ಆ ಹಣವನ್ನು ಎಲ್ಲಿ ಇಟ್ಟಿದೆ ಎಂಬ ಬಗ್ಗೆ ಶೋಧನೆಗಿಳಿದಿರುವ ಈ ಪೊಲೀಸರು, ಉಡುಪಿಯ ಉಪ್ಪೂರು ಶ್ರೀರಾಮ ಸೊಸೈಟಿಗೆ ತೆರಳಿ ತನಿಖೆ ಕೈಗೊಂಡಿದೆ. ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ ಆಸ್ತಿ ಪತ್ರ, ಬಂಗಾರವನ್ನು ಪತ್ತೆ ಮಾಡಿದೆ.…
ವಂಚನೆ ಆರೋಪ; ಚೈತ್ರಾ ಕುಂದಾಪುರ ಬಂಧನ
ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಯಕಿ ಚೈತ್ರಾ ಕುಂದಾಪುರ, ಬಿಜೆಪಿ ನಾಯಕ ಗಗನ್ ಕಡೂರು ಗ್ಯಾಂಗನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ಆರೆಸ್ಸೆಸ್ ಪ್ರಚಾರಕರನ್ನು ಸೃಷ್ಟಿಸಿ ಬಿಜೆಪಿ ರಾಜ್ಯ ನಾಯಕರನ್ನೇ ವಂಚಿಸಿದ ಆರೋಪ ಚೈತ್ರಾ ಕುಂದಾಪುರ ಮೇಲಿದೆ. ತನ್ನ ವಾಕ್ಚಾತುರ್ಯ ಮೂಲಕ ಹಿಂದೂ ಕಾರ್ಯಕರ್ತರ ಮುಗ್ದತೆಯನ್ನು ಬಳಸಿ, ಬಿಜೆಪಿ ಟಿಕೆಟ್ ಕೊಡುವುದಾಗಿ ನಂಬಿಸಿದ್ದ ಚೈತ್ರಾ ಕುಂದಾಪುರ, ಬಿಜೆಪಿ ಯುವಮೋರ್ಚಾ ನಾಯಕ ಗಗನ್ ಕಡೂರು, ಉತ್ತರ ಕರ್ನಾಟಕದ ಹಾಲಶ್ರೀ ಸ್ವಾಮೀಜಿ ಸಹಿತ 7 ಮಂದಿಯ ವಿರುದ್ದ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ನಾಯಕರಾದ ಗೋವಿಂದ ಬಿ.ಪೂಜಾರಿ ಅವರು ಈ ದೂರು ನೀಡಿದ್ದರು. ಪ್ರಕರಣದ ಗಂಭೀರತೆ ಅರಿತ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದಾರೆ.…