ಬೆಳಗಾವಿ: ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಸಚಿವರು, ಹಾರ್ವೆಸ್ಟರ್ ಹಬ್ ಕಟಾವ್ ಯಂತ್ರ ಬಳಕೆ ಮಾಡುವುದರಿಂದ 20 ರಿಂದ 30 ಟನ್ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಕೃಷಿ ಸಚಿವರು ಹೇಳಿದರು. ಬೆಳಗಾವಿ ವಿಭಾಗ ಮಟ್ಟದಲ್ಲಿ ಸುಮಾರು 2150…
Tag: Cheluvarayaswamy
ಸರ್ಕಾರದ ಆಶಯ ಅರಿತು ಕೆಲಸ ಮಾಡಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ.
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿದ ಅವರು, ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದರು. ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು…