‘ಚೆಲುವ ಲಂಚ ಪುರಾಣ’: ನೀವೇ ಪತ್ರದ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”?

ಬೆಂಗಳೂರು: ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ ಹೊರಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎಂಬ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬಗ್ಗೆ ಭಾರೀ ಚರ್ಚೆ ನಡೆದಿರುವಂತೆಯೇ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಸ್ಪಷ್ಟನೆ ಗಮನಸೆಳೆದಿದೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ತಮ್ಮದೇ ಶೈಲಿಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ, ‘ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”?’ ಎಂದು…