ಬೆಂಗಳೂರು: ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ 60 ಲಂಚ ಕೇಳಿದಂತಾಗಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡ ಭಾಸ್ಕರ ರಾವ್ ಉಪಸ್ಥಿತಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿರಿಯ ಸಂಸ್ಕøತಿ ಪುತ್ರನ ಬಳಿ ಶೇ 60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರದಡಿ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ಸಿ.ಟಿ.ರವಿ…