‘ಇಡೀ ಸಮಾಜವನ್ನು ‘ಸಜ್ಜನ ಶಕ್ತಿ’ ನಾಯಕತ್ವದಲ್ಲಿ ಒಟ್ಟಿಗೆ ಕೊಂಡೊಯ್ಯುತ್ತೇವೆ’: RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

ನಾಗ್ಪುರ: ಆರ್‌ಎಸ್‌ಎಸ್ ಯಾರನ್ನೂ ವಿರೋಧಿಸುವುದರಲ್ಲಿ ನಂಬಿಕೆ ಇಡುವುದಿಲ್ಲ ಅಷ್ಟೇ ಅಲ್ಲ, ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮ ಗುಂಪಿಗೆ ಸೇರುತ್ತಾರೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಕಳೆದ 100 ವರ್ಷಗಳಲ್ಲಿ, ರಾಷ್ಟ್ರೀಯ ಪುನರ್ನಿರ್ಮಾಣದ ಚಳುವಳಿಯಾಗಿ ಸಂಘವು ನಿರ್ಲಕ್ಷ್ಯ ಮತ್ತು ಅಪಹಾಸ್ಯದಿಂದ ಕುತೂಹಲ ಮತ್ತು ಸ್ವೀಕಾರದತ್ತ ಸಾಗಿದೆ ಎಂದು ಅವರು ಗಮನಸೆಳೆದಿದ್ದಾರೆ. ‘ರಾಷ್ಟ್ರೀಯ ಸ್ವಯಂಸೇವಕ ಸಂಘವು ತನ್ನ ಸೇವೆಯ ನೂರನೇ ವರ್ಷವನ್ನು ಪೂರ್ಣಗೊಳಿಸುತ್ತಿರುವಾಗ, ಸಂಘವು ಈ ಹೆಗ್ಗುರುತನ್ನು ಹೇಗೆ ಗ್ರಹಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟವಾದ ಕುತೂಹಲವಿದೆ. ಅಂತಹ ಸಂದರ್ಭಗಳು ಆಚರಣೆಗಾಗಿ ಅಲ್ಲ, ಆದರೆ ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು ಆ ಉದ್ದೇಶಕ್ಕೆ ಪುನರ್ ಸಮರ್ಪಿಸಲು ನಮಗೆ ಅವಕಾಶವನ್ನು ಒದಗಿಸುತ್ತವೆ ಎಂಬುದು ಸಂಘಕ್ಕೆ ಪ್ರಾರಂಭದಿಂದಲೂ ಸ್ಪಷ್ಟವಾಗಿದೆ. ಚಳುವಳಿಗೆ ಮಾರ್ಗದರ್ಶನ ನೀಡಿದ ಧೀಮಂತ, ಸಂತ ವ್ಯಕ್ತಿಗಳ ಕೊಡುಗೆಗಳನ್ನು ಮತ್ತು ಈ ಪ್ರಯಾಣದಲ್ಲಿ ನಿಸ್ವಾರ್ಥವಾಗಿ…

ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯಾಲಯ ‘ಧರ್ಮಶ್ರೀ’ ಲೋಕಾರ್ಪಣೆ

ಬೆಂಗಳೂರು: ವಿಶ್ವ ಹಿಂದೂ ಪರಿಷದ್‌ನ ಪ್ರಾಂತ ಕಾರ್ಯಾಲಯ ‘ಧರ್ಮಶ್ರೀ’ ಲೋಕಾರ್ಪಣೆಯಾಗಿದೆ. ಧಾರ್ಮಿಕ ವಿಧಿವಿಧಾನಗಳೊಂದಿಗೆ ಕೈಂಕರ್ಯ ಗಮನಸೆಳೆಯಿತು. ಬೆಂಗಳೂರಿನ ಶಂಕರಪುರದಲ್ಲಿ ನಿರ್ಮಾಣವಾಗಿರುವ ‘ಧರ್ಮಶ್ರೀ’ ಕಾರ್ಯಾಲಯ ಧರ್ಮ ರಕ್ಷಣಾ ಕೈಂಕರ್ಯದ ಶಕ್ತಿಯಾಗಿರುವ ವಿಶ್ವ ಹಿಂದೂ ಪರಿಷದ್‌ನ ಕರ್ನಾಟಕ ದಕ್ಷಿಣ ಪ್ರಾಂತ ಚಟುವಟಿಕೆಗಳ ಕೇಂದ್ರಸ್ಥಾನವಾಗಲಿದೆ. ಭಾನುವಾರ ನೆರವೇರಿದ ‘ಧರ್ಮಶ್ರೀ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ದಿವ್ಯಸಾನ್ನಿಧ್ಯ ವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮುಖ್ಯಭಾಷಣ ಮಾಡಿದರು.‌ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಹಿರಿಯ ಕಾರ್ಯಕರ್ತರಾದ ವೈ.ಕೆ‌.ರಾಘವೇಂದ್ರ ರಾವ್, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷೆ ವಿಜಯಲಕ್ಷ್ಮಿ ದೇಶಮಾನೆ, ಕ್ಷೇತ್ರೀಯ ಪ್ರಚಾರಕ್ ಸುಧೀರ್, ಕ್ಷೇತ್ರೀಯ ಸಂಘಚಾಲಕ ಡಾ.ಪಿ.ವಾಮನ್ ಶೆಣೈ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.