ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Tag: DCM d.k.shivakumar
ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?
ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್ ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ.…