ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೀಗ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರೇ ಟಾರ್ಗೆಟ್. ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕರು ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣವನ್ನು ಮುಂದಿಟ್ಟು ನೀಡುತ್ತಿರುವ ಹೇಳಿಕೆಗಳು ಕುತೂಹಲಕ್ಕೆ ಕಾರಣವಾಗುತ್ತಿದೆ. ಅದರಲ್ಲೂ ಬಿಎಸ್‌ವೈ ವಿರುದ್ದ ಪ್ರಕರಣ ದಾಖಲಾದ ಸಂದರ್ಭದಲ್ಲಿ ದೂರುದಾರರ ಮಾನಸಿಕ ಸ್ಥಿರತೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ. ನಂತರ ತಿಂಗಳುಗಟ್ಟಲೆ ಮೌನವಿದ್ದ ಕಾಂಗ್ರೆಸ್ ನಾಯಕರು ಇದೀಗ ತಡವಾಗಿ ಬಿಎಸ್‌ವೈ ಪ್ರಕರಣವನ್ನು ಕೆದಕುತ್ತಿರುವ ವೈಖರಿ ಗಮನಿಸಿದರೆ ಮುಂದಿನ ಬೆಳವಣಿಗೆ ಕುತೂಹಲ ಮೂಡುವಂತಿದೆ. ಈ ನಡುವೆ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಜಾನಿ ಮಾಸ್ಟರ್ ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ಬಿಜೆಪಿ ನಾಯಕರು ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತೋರುತ್ತಿಲ್ಲ ಯಾಕೆ?…

ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ವೀರ್ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು” ಎಂಬುದು ಸುಳ್ಳು ಹೇಳಿಕೆ ಎಂದರು. ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ತಿಳಿಸಿದ್ದಾರೆ.